
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ವಿವಿಧ ಕ್ಷೇತ್ರಗಳಿಗೆ ಹಲವು ಮಹತ್ವದ ಯೋಜನೆ ಘೋಷಿಸಿದ್ದಾರೆ.
ಈ ವೇಳೆ ಪತ್ರಕರ್ತರಿಗೆ ಗುಡ್ ನ್ಯೂಸ್ ನೀಡಿದ್ದು, ಮಾಸಾಶನ ಹೆಚ್ಚಳ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
· ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.
· ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ ನಿವೇಶನದಲ್ಲಿ ಪಿಪಿಪಿ ಮಾದರಿಯಲ್ಲಿ ಚಿತ್ರಮಂದಿರ ಸಮುಚ್ಛಯ ಅಭಿವೃದ್ಧಿ.
· ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್ ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ಚಲನಚಿತ್ರ ಭಂಡಾರ ಸ್ಥಾಪನೆ.
· ಪತ್ರಕರ್ತರ ಮಾಸಾಶನ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ.
· ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆ ಸೃಜಿಸಲು ಕ್ರಮ.
· ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ “ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ” ಯೋಜನೆ ಅನುಷ್ಠಾನ.
· ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ.
· ಎಲ್ಲಾ ವಿಧದ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ಮಿತಿಗೊಳಿಸಲು ಕ್ರಮ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ