
ಪ್ರಗತಿವಾಹಿನಿ ಸುದ್ದಿ: ಹಿರಿಯ ಪತ್ರಕರ್ತರಾದ ಎಂ.ಕೆ.ಭಾಸ್ಕರ್ ರಾವ್ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ರಾವ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.
ಪ್ರಜಾವಾಣಿ ಸಹಾಯಕ ಸಂಪಾದಕರಾಗಿದ್ದ ಎಂ.ಕೆ.ಭಾಸ್ಕರ್ ರಾವ್, ನಿವೃತ್ತಿ ಬಳಿಕ ಅಂಕಣಕಾರರಾಗಿ ಗುರುತಿಸಿಕೊಂಡಿದ್ದರು. ಹಿರಿಯ ಪತ್ರಕರ್ತ ಭಾಸ್ಕರ್ ರಾವ್ ಅಗಲಿಕೆಗೆ ಪತ್ರಿಕಾ ರಂಗ ಕಂಬನಿ ಮಿಡಿದಿದೆ.
ಭಾಸ್ಕರ್ ರಾವ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ