Kannada NewsKarnataka NewsLatest

*ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ರಾಜ್ಯೋತ್ಸವ ಪ್ರಶಸ್ತಿ ವಿಜೇತ, ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ವಿಧಿವಶರಾಗಿದ್ದಾರೆ.

ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೊಹರ್ ಪ್ರಸಾದ್ ನಾಲ್ಕು ದಶಕಗಳ ಕಾಲ ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.

Home add -Advt

64 ವರ್ಷದ ಮನೋಹರ್ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನವ ಭಾರತ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭಿಸಿದ್ದ ಅವರು, ಉದಯವಾಣಿ ವರದಿಗಾರರಾಗಿ, ಬ್ಯೂರೋ ಚೀಫ್ ಆಗಿ, ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು, ಸರಳ, ಸಜ್ಜನಿಕೆಯ ಮನೋಹರ್ ಪ್ರಸಾದ್ ಅಗಲಿಕೆಗೆ ಪತ್ರಿಕಾ ರಂಗ ಕಂಬನಿ ಮಿಡಿದಿದೆ.


Related Articles

Back to top button