GIT add 2024-1
Laxmi Tai add
Beereshwara 33

*ಹಿರಿಯ ಪತ್ರಕರ್ತ ರಾಮ ಮನಗೂಳಿ ಇನ್ನಿಲ್ಲ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಪತ್ರಿಕಾ ರಂಗಕ್ಕೆ ಮತ್ತೊಂದು ಆಘಾತ. ಹಿರಿಯ ಪತ್ರಕರ್ತ ರಾಮ ಮನಗೂಳಿ (62) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆಯ ರಾಮ ಮನಗೂಳಿ ಅನಾರೋಗ್ಯದಿಂದ ಕೆರೊಡಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ರಾಮ ಮನಗೂಳಿ ಅವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು, ನಾಡನುಡಿ ದಿನ ಪತ್ರಿಕೆಯ ಸಂಪಾದಕರಾಗಿದ್ದರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

Emergency Service

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ ಬೆನ್ನಲ್ಲೇ ಇದೀಗ ಮತ್ತೋರ್ವ ಹಿರಿಯ ಪತ್ರಕರ್ತರಾಗಿದ್ದ ರಾಮ ಮನುಗೂಳಿ ಅಗಲಿಕೆ ಪತ್ರಿಕಾ ರಂಗಕ್ಕೆ ಆಘಾತ ತಂದಿದೆ. ಹಿರಿಯ ಪತ್ರಕರ್ತರ ನಿಧನಕ್ಕೆ ಗಣ್ಯರು, ಪತ್ರಿಕಾ ರಂಗದವರು ಕಂಬನಿ ಮಿಡಿದಿದ್ದಾರೆ.

ಬಾಗಲಕೋಟ ಸಂಯುಕ್ತ ಕರ್ನಾಟಕ ಮುಖ್ಯಸ್ಥರಾಗಿ‌ ಸೇವೆ ಸಲ್ಲಿಸಿದ್ದ, ಹಿರಿಯ ಪತ್ರಕರ್ತ ಬಾಗಲಕೋಟ ರಾಮಮನಗೂಳಿ (62)‌ನಿದನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಸಂತಾಪ ವ್ಯಕ್ತಪಡಿಸಿದೆ. KUWJ ರಾಜ್ಯ ಉಪಾಧ್ಯಕ್ಷರಾಗಿ ಸಲ್ಲಿಸಿದ‌ ಸೇವೆ ಅನನ್ಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ


Bottom Add3
Bottom Ad 2