Latest

ಸರಕಾರಿ ಕಾರ್ಯಕ್ರಮಗಳಲ್ಲಿ ಇವೆಲ್ಲ ನಿಷೇಧ! ರಾಜ್ಯ ಸರಕಾರದ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸರಕಾರಿ ಕಾರ್ಯಕ್ರಮಗಳಲ್ಲಿ ಕಾಣಿಕೆಗಳನ್ನು ನೀಡುವುದನ್ನು ನಿಷೇಧಿಸಿ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಟ್ಟ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳಲ್ಲಿ ಹುಗುಚ್ಛ, ಹಾರ, ತುರಾಯಿ, ಹಣ್ಣು, ಶಾಲು, ನೆನಪಿನ ಕಾಣಿಕೆ ಇತ್ಯಾದಿಗಳನ್ನು ಕೊಡುವುದನ್ನು ನಿಷೇಧಿಸಲಾಗಿದೆ.

Home add -Advt

ಬದಲಾಗಿ ಕನ್ನಡದ ಪುಸ್ತಕಗಳನ್ನು ಕಾಣಿಕೆಯಾಗಿ ಕೊಡಬಹುದು ಎಂದು ಸರಕಾರ ಆದೇಶಿಸಿದೆ.

ಎಲ್ಲ ಇಲಾಖೆಗಳೂ ಇದನ್ನು ಪಾಲಿಸುವಂತೆ ನಿರ್ದೇಶಿಸಲಾಗಿದೆ.

  ಸಿಎಂ ಆದೇಶ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು.  ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ  ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು  ಅವರು ತಿಳಿಸಿದರು.

ಆದೇಶ ಪ್ರಕಟ

ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು.
ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

ಪೊಲೀಸರನ್ನು ಶ್ಲಾಘಿಸುತ್ತಲೇ ಎಚ್ಚರಿಕೆಯನ್ನೂ ನೀಡಿದ ಸಿಎಂ

Related Articles

Back to top button