Karnataka NewsLatest

*ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಈ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಭೀಕರ ಅಪಘಾತಕ್ಕೀಡಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಡೆದಿದೆ.

ಎತ್ತಿನಹೊಳೆ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಸರ್ಕಾರದ ಕಾರ್ಯಕ್ರಮಕ್ಕೆ ವಾರ್ತಾ ಇಲಾಖೆಯಿಂದ ಪತ್ರಕರ್ತರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವಾಹನದ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ.

ವಾಹನದ ಬ್ರೇಕ್ ಫೇಲ್ ಆಗಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 7 ಜನ ಪತ್ರಕರ್ತರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button