
ಪ್ರಗತಿವಾಹಿನಿ ಸುದ್ದಿ: ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದ ಲಖನೌ-ದೆಹಲಿ ಹೆದ್ದಾರಿಯಲಿ ನಡೆದಿದೆ.
ರಾಘವೇಂದ್ರ ಬಾಜಪೈ ಕೊಲೆಯಾದ ಪತ್ರಕರ್ತ. ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರ ಹಾಗೂ ಆರ್ ಟಿ ಐ ಕಾರ್ಯಕರ್ತರಾಗಿದ್ದ ರಾಘವೇಂದ್ರ ಅವರಿಗೆ ಫೋನ್ ಕರೆ ಬಂತು ಎಂದು ಮನೆಯಿಂದ ಹೊರ ಹೋದವರು ವಾಪಸ್ ಆಗಿಲ್ಲ.
ಹೆದ್ದಾರಿಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ