Belagavi NewsBelgaum NewsKannada NewsKarnataka NewsPolitics

ಜೂ. 25 ರಂದು ಸಂವಾದ ಕಾರ್ಯಕ್ರಮ: ಶಾಸಕ ಅಭಯ ಪಾಟೀಲ್

ಪ್ರಗತಿವಾಹಿನಿ ಸುದ್ದಿ:  ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು, ತುರ್ತು ಪರಿಸ್ಥಿತಿ, ಸಂವಿಧಾನಕ್ಕೆ ಮಾಡಿದ ಅಪಚಾರ ವಿಷಯ ಕುರಿತು ಸಂವಾದ ಕಾರ್ಯಕ್ರಮ ನಗರದ ಮಹಾವೀರ ಭವನದಲ್ಲಿ ಜೂ‌.25 ಮಂಗಳವಾರ ದಂದು ಬೆಳಿಗ್ಗೆ 11 ಘಂಟೆಗೆ ನಡೆಯಲಿದೆ‌. ಈ ಕಾರ್ಯಕ್ರಮಕ್ಕೆ ಕಾನೂನು ವಿದ್ಯಾರ್ಥಿಗಳು, ನ್ಯಾಯವಾದಿಗಳು, ಹಿಂದೂಳಿದ ವರ್ಗದ ಹಾಗೂ ಸಾಮಾಜಿಕ‌ ಚಿಂತಕರು ಆಗಮಿಸಿಬೇಕೆಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದ್ದಾರೆ.

ನಗರದ ಮಹಾವೀರ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ, ಬಾಯಿಮಾತಿನಿಂದ ಸಂವಿಧಾನದ ರಕ್ಷಣೆ ಮಾಡತ್ತೆವೆ ಎಂದು ಹೇಳುವ ಕಾಂಗ್ರೆಸ್ ‌ನಾಯಕರು ಮೊದಲು ಸಂವಿಧಾನಕ್ಕೆ ಮಾಡಿದ ಅಪಚಾರಕ್ಕೆ ದೇಶದ ಜನತೆಯ ಕ್ಷಮೆ ಕೊರಬೇಕೆಂದರು.

ಬೆಳಗಾವಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ‌ ಮಾತನಾಡಿ, ತಮ್ಮ ಸ್ವಾರ್ಥ ಸಾಧನೆಗಾಗಿ ದೇಶದಲ್ಲಿ  ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ನೀತಿಯ ಈ ದುಷ್ಟ ಕೃತ್ಯ ದೇಶಕ್ಕೆ‌ ಮುಂದೆ  ಯಾವತ್ತೂ ಬರಬಾರದು. ಆ ಕರಾಳ ಅಧ್ಯಾಯದ ನೆನಪು ಮಾಡಿಕೊಳ್ಳುವ ಅವಶ್ಯಕತೆ ಇದೆ. 

ಕಾಂಗ್ರೆಸ್ ಪಕ್ಷದ ಡಿಎನ್‍ಎಯಲ್ಲೇ ವ್ಯಕ್ತಿಗತ ಸ್ವಾರ್ಥಕ್ಕಾಗಿ ಏನನ್ನು ಬೇಕಾದರೂ ಮಾಡುವ ಮನಸ್ಥಿತಿ ಇದೆ. ಈ ಮನಸ್ಥಿತಿ ಪ್ರಜಾಪ್ರಭುತ್ವಕ್ಕೂ ಅಪಾಯಕಾರಿಯಾಗಿದೆ. ಕಾಂಗ್ರೆಸ್ ಪಕ್ಷವು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ನೇತೃತ್ವದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ ಮಾಡಿತ್ತು. ಅದೊಂದು ಕರಾಳ ದಿನ. ಆ ಸಂದರ್ಭದಲ್ಲಿ ಇದ್ದ  ಕಾಂಗ್ರೆಸ್ ಪಕ್ಷದ ಅಗ್ರ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ಸಿನ ಜೊತೆಗಿದ್ದರು ಇಲ್ಲಿಯವರೆಗೂ ಖಂಡಿಸಿಲ್ಲ. ಮಾಜಿ‌ ಪ್ರಧಾನಿ ಇಂದಿರಾ ಗಾಂಧಿಯವರು ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ದಮನ ಮಾಡಿದ್ದರು ಎಂಬುದು ಖರ್ಗೆಯವರಿಗೆ ಅರ್ಥ ಆಗಬೇಕಿತ್ತು.

ತನ್ನ ಸ್ವಾರ್ಥಕ್ಕಾಗಿ, ಅಧಿಕಾರದಲ್ಲಿ ಉಳಿಯಬೇಕೆಂಬ ಏಕೈಕ ದುರುದ್ದೇಶದಿಂದ ಅಲಹಾಬಾದ್ ಕೋರ್ಟ್ ತೀರ್ಪಿನ ವಿರುದ್ಧ ಸಂವಿಧಾನವನ್ನೇ ಬುಡಮೇಲು ಮಾಡಿದ್ದರು. ವಿಪಕ್ಷ ನಾಯಕರನ್ನೆಲ್ಲ ಜೈಲಿಗೆ ಅಟ್ಟಿದ್ದಲ್ಲದೆ, ಪತ್ರಿಕಾ ಸ್ವಾತಂತ್ರ್ಯ ಹರಣ ಮಾಡಿದ್ದರು. ಮೂಲಭೂತ ಹಕ್ಕುಗಳ ದಮನ ಮಾಡಿದ್ದರು ಎಂದರು.

ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು, ತುರ್ತು ಪರಿಸ್ಥಿತಿ ಸಂವಿಧಾನಕ್ಕೆ ಮಾಡಿದ ಅಪಚಾರ ಎಂಬ ಸಂವಾದ ಕಾರ್ಯಕ್ರಮಕ್ಕೆ ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಪ್ರಮುಖ ವಕ್ತಾರರಾಗಿ, ಅಥಿತಿಗಳಾಗಿ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಮತ್ತು ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ರಾಂತ ಸೇನಾಧಿಕಾರಿ ಕ್ಯಾಪ್ಟನ್ ಚಾಂಗಪ್ಪ‌ ಪಾಟೀಲ ವಹಿಸಲಿದ್ದಾರೆ. 

ನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಉಪಮಹಾಪೌರ ಆನಂದ  ಚವ್ಹಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಗಣೇಶ ದೇಸಾಯಿ, ವಿಠಲ ಸಾಯಣ್ಣವರ ಇತರರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button