Cancer Hospital 2
Beereshwara 36
LaxmiTai 5

ಜೂ. 29 ರವರೆಗೆ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ 

Anvekar 3

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಮಳೆಯು ಜೂ. 29 ರವರೆಗೆ ಭರ್ಜರಿಯಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

Emergency Service

ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಹ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಸಾಧಾರಣ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದ್ದು, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ವಿಜಯನಗರ, ಮಂಡ್ಯ ತುಮಕೂರು ಹಾಗೂ ಚಿತ್ರದುರ್ಗದಲ್ಲಿಯೂ ಮುಂಗಾರು ಅಬ್ಬರ ಮುಂದುವರೆಯಲಿದೆ.

Bottom Add3
Bottom Ad 2