Kannada NewsKarnataka NewsLatest

*ಕಿಮ್ಸ್ ಆಸ್ಪತ್ರೆ ಉದ್ಘಾಟಿಸಿದ ಜೂ.NTR: ನಟನನ್ನು ನೋಡಲು ಮುಗಿಬಿದ್ದ ಅಭಿಮಾನಿಗಳನ್ನು ಚದುರಿಸಲು ಪೊಲೀಸರಿಂದ ಲಘು ಲಾಠಿಪ್ರಹಾರ*

ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ಖ್ಯಾತ ನಟ ಜೂ.ಎನ್ ಟಿಆರ್ ಬೆಂಅಗ್ಳೂರಿನಲ್ಲಿ ಕಿಮ್ಸ್ ಆಸ್ಪತ್ರೆ ಉದ್ಘಟನೆ ಮಾಡಿದ್ದು, ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿರುವ ಘಟನೆ ನಡೆದಿದೆ.

ಬೆಂಗಳ್ಯ್ರಿನ ಮಹದೇವಪುರದಲ್ಲಿ ನಟ ಜೂ.ಎನ್ ಟಿಆರ್ ಕಿಮ್ಸ್ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದ್ದಾರೆ. ನಟನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಅಭಿಮಾನಿಗಳಿಂದ ನೂಕು ನುಗ್ಗಲು ಉಂಟಾಗುತ್ತಿದ್ದಂತೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button