ಪ್ರಗತಿವಾಹಿನಿ ಸುದ್ದಿ, ಹೊಸಪೇಟೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಈ ಸಮುದಾಯಗಳಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದರು.
ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಭಯವಿಲ್ಲ. ನಮ್ಮ ಸರ್ಕಾರ ರೈತ ಕೂಲಿಕಾರ್ಮಿಕರಿಗೆ, ನೇಕಾರರು,ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋಚಾಲಕರ ಮಕ್ಕಳಿಗೂ ವಿದ್ಯಾನಿಧಿ ಕೊಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಬಡಿಗರು, ಕಮ್ಮಾರರು, ವಿಶ್ವಕರ್ಮರು, ಮೇದಾರರು ಸೇರಿದಂತೆ ಕುಶಲಕರ್ಮಿಗಳಿಗೆ 50 ಸಾವಿರ ಧನಸಹಾಯ ನೀಡಲಾಗುತ್ತಿದೆ. ಜಗಜೀವನರಾಂ ಹೆಸರಿನಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀಸಾಮರ್ಥ್ಯ ಯೋಜನೆಯಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಯುವಕರ ಸಂಘಕ್ಕೆ ಆರ್ಥಿಕ ನೆರವು ನೀಡಿ, ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ 5 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ ಎಂದರು.
ಈಗ ಜನರಿಗೆ ಭಯವಿಲ್ಲ :
ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರಿಗೆ ಭಯವಿಲ್ಲ. ಎಸ್ಸಿ ಎಸ್ಟಿ ಸಮುದಾಯವರಿಗೆ ಮೀಸಲಾತಿ ಹೆಚ್ಚಳ ಮಾಡುವ ಬೇಡಿಕೆ ಇದ್ದರೂ ನೀವು ನಿರ್ಧಾರ ಮಾಡಿಲ್ಲ. ನಾವು ನಿರ್ಧಾರ ಮಾಡಿದರೆ ಅದನ್ನು ಪ್ರಶ್ನಿಸುತ್ತೀರಾ. ನಮಗೂ ಕಾನೂನು ಗೊತ್ತಿದೆ.ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ನಾನು ನಿಲ್ಲುತ್ತೇನೆ ಎಂಬ ವಚನ ಕೊಡುತ್ತೇನೆ.
ಬಿಜೆಪಿ ಸರ್ಕಾರದಲ್ಲಿ ದೀನ ದಲಿತರು ಭಯಭೀತರಾಗಿದ್ದಾರೆ. ಅಂತ ಹೇಳಿದ್ದಿರಿ, ಆದರೆ ನೀವು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಪ್ರಯತ್ನ ಮಾಡಿದ್ದಿರಿ ಆಗ ಜನರಿಗೆ ಭಯ ಇತ್ತು. ನಾವು ವೀರಶೈವ ಲಿಂಗಾಯತರನ್ನು ಒಂದಾಗುವಂತೆ ಮಾಡಿದ್ದೇವೆ.
ನಿಮ್ಮ ಕಾಲದಲ್ಲಿ ಕೊಲೆಗಳು ನಡೆಯುತ್ತಿದ್ದವು ಜನರು ಭಯಭೀತರಾಗಿದ್ದರು . ಆ ಭಯ ಈಗ ಇಲ್ಲ ಎಂದರು.
ಏಕ್ ಭಾರತ ಶ್ರೇಷ್ಠ ಭಾರತ :
ಪ್ರಧಾನಿ ನರೇಂದ್ರ ಮೊದಿಯವರು ಏಕ್ ಭಾರತ ಶ್ರೇಷ್ಟ ಭಾರತ ಎಂದು ಹೇಳಿದ್ದಾರೆ. ಪ್ರಧಾನಿಮೋದಿಯವರ ನಾಯಕತ್ವದಲ್ಲಿ ದೇಶ ಮುನ್ನಡೆಯಲು ಜನ ಬಯಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು, ನವಕರ್ನಾಟಕ ನಿರ್ಮಾಣಕ್ಕಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್,ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.
ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯ ಬಿಜೆಪಿ ಸರಕಾರದ ಮೂಲ ಸಿದ್ಧಾಂತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ