
ಪ್ರಗತಿವಾಹಿನಿ ಸುದ್ದಿ: ಜ್ಯುವೆಲ್ಲರಿ ಶಾಪ್ ಗೆ ನುಗ್ಗಿದ ದುಷ್ಕರ್ಮಿಗಳು ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯ ದೇವಿನಗರದಲ್ಲಿ ನಡೆದಿದೆ.
ಲಕ್ಷ್ಮೀ ಬ್ಯಾಂಕರ್ಸ್ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಏಕಏಕಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಗಯಗೊಂಡಿದ್ದಾರೆ.
ಅಪ್ಪುರಾಮ್, ಅಭಿರಾಮ್ ಗಾಯಾಳುಗಳು. ಆದರೆ ಚಿನ್ನವನ್ನು ದೋಚುವ ಕಳ್ಳರ ಯತ್ನ ವಿಫಲವಾಗಿದೆ. ಜ್ಯುವೆಲ್ಲರಿ ಶಾಪ್ ಮಾಲೀಕ, ಸಿಬ್ಬಂದಿಗಳು ಅಲರ್ಟ್ ಆಗುತ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಲ್ಲೇ ಒಂದು ಗನ್ ಬಿಟ್ಟು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ