Belagavi NewsBelgaum NewsEducationLatest

*ಜ್ಯೋತಿ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿ ಪ್ರಧಾನ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ನಗರದ ಶಹಾಪುರದ ಚಿಂತಾಮಣರಾವ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಜ್ಯೋತಿ ಸಿ.ಎಂ. ಅವರಿಗೆ ರಾಜ್ಯ ಸರಕಾರದ ಉತ್ತಮ ಉಪನ್ಯಾಸಕ ಪ್ರಶ್ತಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರದಾನ ಮಾಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ  ಬ್ಯಾಕ್ವೆಟ್  ಹಾಲ್ ನಲ್ಲಿ ಶುಕ್ರಚಾರ(ಸೆ.5) ಆಯೋಜಿಸಲಾಗಿದ್ದ ಭಾರತ ರತ್ನ ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಚಿಂತಾಮಣರಾವ್ ಕಾಲೇಜಿನ ಜ್ಯೋತಿ ಅವರು ವಿವಿಧ ಸಂಘ-ಸಂಸ್ಥೆಗಳು ನೀಡುವ 92 ಕ್ಕಿಂತ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. 

ವಿದ್ಯಾರ್ಥಿಗಳ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದು, ಪ್ರತಿಶತ ನೂರರಷ್ಟು ಫಲಿತಾಂಶ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. 

Home add -Advt

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Back to top button