Kannada NewsKarnataka NewsLatest

*ನಿವೃತ್ತ IPS ಅಧಿಕಾರಿ ಜೆಡಿಎಸ್ ಗೆ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಟಿಕೆಟ್ ಆಕಾಂಕ್ಷಿಗಳ ಲಾಭಿಯೂ ಜೋರಾಗಿದೆ. ಈ ನಡುವೆ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಇಂದು ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

ಜನತಾದಳ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಮಾಜಿ ಅಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಚಿವ ಅನಿಲ್ ಲಾಡ್ ಮುಂತಾದವರು ಉಪಸ್ಥಿತರಿದ್ದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button