
ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ.
ತಮಿಳುನಾಡಿನ ಕೋಯಮತ್ತೂರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಇಲ್ಲ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯನ್ನು ಮಾಡುವುದಿಲ್ಲ. ಯಾವುದೇ ಊಹಾಪೋಹಗಳಿಗೂ ಉತ್ತರವನ್ನೂ ನೀಡಲ್ಲ ಎಂದು ತಿಳಿಸಿದ್ದಾರೆ.
ಪಕ್ಷಕ್ಕೆ ಒಳ್ಳೆಯದಾಗಬೇಕು. ಉಜ್ವಲಭವಿಷ್ಯವಿರಬೇಕು ಎಂದು ಆಶಿಸುತ್ತೇನೆ. ಒಗ್ಗಟ್ಟಿನಿಂದ ಹೊಸ ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.