
ಪ್ರಗತಿವಾಹಿನಿ ಸುದ್ದಿ: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
೮೫ ವರ್ಷದ ಕೆ.ಬಿ.ಗಣಪತಿ ಹೃದಯಾಘಾತದಿಂದ ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆ.ಬಿ.ಗಣಪತಿ ಅವರು ಮೈಸೂರು ಮಿತ್ರ ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರು. ಕಳೆದ 50 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಕೊಡಗಿನವರಾದ ಕೆ.ಬಿ.ಗಣಪತಿ ತಮ್ಮದೇ ಅಂಕಣದ ಮೂಲಕ ಗಮನ ಸೆಳೆಯುತ್ತಿದ್ದರು. ಮುಂನೈನ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿದ ಅವರು ಬಳಿಕ ಮೈಸೂರಿಗೆ ಬಂದು ಇಂಗ್ಲೀಷ್ ನಲ್ಲಿ ಸ್ಟಾರ್ ಆಫ್ ಮೈಸೂರು ಹಾಗೂ ಕನ್ನಡದಲ್ಲಿ ಮೈಸೂರು ಮಿತ್ರ ಪತ್ರಿಕೆಗಳನ್ನು ಆರಂಭಿಸಿದ್ದರು.