
ಪ್ರಗತಿವಾಹಿನಿ ಸುದ್ದಿ: ಇಂದು ಬೆಳ್ಳಂ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಅವರಿಗೆ ಶಾಕ್ ನೀಡಿದ್ದು, ಅವರ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಅವರ ಸಹೋದರನ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಕೆಸಿ ವೀರೇಂದ್ರ ಹಾಗೂ ಅವರ ಸಹೋದರ ಕೆ.ಸಿ ನಾಗರಾಜು ಹಾಗೂ ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದು ಅಗತ್ಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.