Latest

ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯಗೆ ಬ್ಲ್ಯಾಕ್ ಮೇಲ್

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಎಸಿಬಿ ಅಧಿಕಾರಿ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಚೆನ್ನೈ ಎಸಿಬಿ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿರುವ ವ್ಯಕ್ತಿ, ತಮ್ಮ ಮೇಲೆ ದಾಳಿ ನಡೆಯಲಿದೆ. ಎಸಿಬಿ ದಾಳಿ ತಡೆಯಬೇಕೆಂದರೆ ಬರೋಬ್ಬರಿ 1 ಕೋಟಿ ರೂಪಾಯಿ ಹಣ ನೀಡಬೇಕು ಎಂದು ಬೆದರಿಕೆಯೊಡ್ಡಿ, ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎನ್ನಲಾಗಿದೆ.

Home add -Advt

ಈ ಕುರಿತು ಶಾಸಕ ಕೆ.ಜಿ.ಬೋಪಯ್ಯ ಮಡಿಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆ

Related Articles

Back to top button