ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ.
ಜಾರ್ಜ್ ಅವರು ಪತ್ನಿ ಹಾಗೂ ಮಕ್ಕಳ ಹೆಸರಲ್ಲಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ದಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಸಮನ್ಸ್ ನೀಡಿದೆ.
ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಅವರಿಗೂ ಸಮನ್ಸ್ ನೀಡಿರುವ ಇಡಿ, ದೇಶ- ವಿದೇಶದಲ್ಲಿರುವ ಸ್ಥಿರ ಹಾಗೂ ಚರಾಸ್ತಿ ಮಾಹಿತಿ ಕೋರಿ ಫೆಮಾ ಆಕ್ಟ್ ಅಡಿಯಲ್ಲಿ ಮಾಹಿತಿ ಕೇಳಿ, ಜ.16ರಂದುವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ