
ಪ್ರಗತಿವಾಹಿನಿ ಸುದ್ದಿ; ಉಡುಪಿ: ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ಭಾರತೀಯ ಸಂಗೀತ ಲೋಕದಲ್ಲಿ ದೊಡ್ಡ ಹೆಸರು ಕೆ.ಜೆ. ಯೇಸುದಾಸ್ ಅವರದ್ದು. 10ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 80 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿರುವ ಕೀರ್ತಿ ಅವರದ್ದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ