Kannada NewsKarnataka NewsLatestPolitics
*ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದ ಕೆ.ಎನ್.ರಾಜಣ್ಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ ಎಂದಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಒಂದು ವೇಳೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ. ಈಗಾಗಲೇ ನಾನು ಈ ಮಾತನ್ನು ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧ ಎಂದರು.
ಶಿವಕುಮಾರ್ ಸಂಪುಟದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ. ಬೇರೆಯವರುಗೆ ಅವಕಾಶ ಕೊಡಲಿ. ನನಗೆ ಯಾವ ಸ್ಥಾನವೂ ಬೇಕಾಗಿಲ್ಲ. ನನಗೆ ಅಧಿಕಾರ ದಾಹವೂ ಇಲ್ಲ. ಹಾಗಂತ ಅವರು ಸಿಎಂ ಆಗ್ತಾರೆ ಎಂದು ಹೇಳುತ್ತಿಲ್ಲ. ಅದೇನು ಅವರು ಸಿಎಂ ಆಗೇ ಬಿಡ್ತಾರೆ ಅಂದುಕೊಂಡು ಬಿಟ್ಟಿದ್ದೀರಾ? ಎಂದು ಕೇಳಿದ್ದಾರೆ.



