*ಸಚಿವ ಕೆ.ಎನ್.ರಾಜಣ್ಣ ಸಂಪುಟದಿಂದ ವಜಾ: ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಆದೇಶ*

ಪ್ರಗತಿವಾಹಿನಿ ಸುದ್ದಿ: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಬದಲಾಗಿ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಅಧಿಕೃತ ಆದೇಶ ಪತ್ರ ರವಾನೆಯಾಗಿದೆ. ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯಿಂದ ಸರ್ಕಾರಕ್ಕೆ ಅಧಿಕೃತವಾಗಿ ಆದೇಶ ಪತ್ರ ಪ್ರಕಟಿಸಿದ್ದಾರೆ. *ಕೆ.ಎನ್.ರಾಜಣ್ಣ ಅವರ ರಾಜೀನಾಮೆ ಅಂಗೀಕರಿಸಿದ ಸಿಎಂ* Home add -Advt