
ಪ್ರಗತಿವಾಹಿನಿ ಸುದ್ದಿ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಐಡಿ, ಡಿಜಿ & ಐಜಿಪಿಗೆ ವರದಿ ನೀಡಿದೆ.
ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಸಿಐಡಿ ವರದಿ ನೀಡಿದೆ ಎಂದು ತಿಳಿದುಬಂದಿದೆ.
ಕಳೆದ ವಿಧಾನಸಭಾ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡಿದ್ದ ಸಚಿವ ಕೆ.ಎನ್.ರಾಜಣ್ಣ ತನಗೆ ಹನಿಟ್ರ್ಯಾಪ್ ಯತ್ನ ನಡೆದಿತ್ತು ಎಂದು ಹೇಳಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ ಪ್ರಕರಣದ ಬಗ್ಗೆ ಸಾಕ್ಷಿಗಳಿಲ್ಲ, ಕೇಸ್ ನಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದೆ.