Politics

*ಡಿಕೆಶಿ ನಡೆ ಎಷ್ಟರ ಮಟ್ಟಿಗೆ ಸರಿ? ಅವರೇ ಹೇಳಬೇಕು ಎಂದು ಗರಂ ಆದ ಸಚಿವ ರಾಜಣ್ಣ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಇಶಾ ಫೌಂಡೇಶನ್ ನ ಸದ್ಗುರು ಜಗ್ಗಿ ವಾಸುದೇವ್ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಚಾರ ಕಾಂಗ್ರೆಸ್ ನಾಯಕರಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ಡಿ.ಕೆ.ಶಿವಕುಮಾರ್ ಅವರು ಸದ್ಗುರು ಜೊತೆ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಅವರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎನಿಸುತ್ತದೆ ಎಂಬುದನ್ನು ಅವರೇ ಹೇಳಬೇಕು ಎಂದಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿ ಯಾರು? ರಾಹು ಗಾಂಧಿ ಯಾರೆಂದೇ ತನಗೆ ಗೊತ್ತಿಲ್ಲ ಎಂದು ಸದ್ಗುರು ಹೇಳಿದ್ದರು. ಅಂತವರ ಜೊತೆ ವೇದಿಕೆ ಕಾರ್ಯಕ್ರಮ ಹಂಚಿಕೊಂಡಿದ್ದಾರೆ ಎಂದರೆ ಡಿ.ಕೆ.ಶಿವಕುಮಾರ್ ಅವರೇ ಈ ಬಗ್ಗೆ ಹೇಳಬೇಕು ಎಂದು ಗರಂ ಆಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button