Latest

ಸಂಜೆ 4ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಬೊಮ್ಮಾಯಿ; ವರಿಷ್ಠರ ಭೇಟಿಗೆ ಸಮಯ ನಿಗದಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಧನ್ಯವಾದ ತಿಳಿಸಲಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದೇನೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ ಭವನದಲ್ಲಿ ಭೇಟಿಯಾಗುತ್ತೇನೆ. ಸಂಜೆ 4 ಗಂಟೆಗೆ ಪ್ರಧಾನಿ ನಿವಾಸದಲ್ಲಿ ಪ್ರಧಾನಿ ಮೋದಿ ಭೇಟಿಯಾಗುತ್ತೇನೆ ಎಂದರು.

ನಂತರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ. ಸಿಎಂ ಆದ ಬಳಿಕ ನಮ್ಮ ನಾಯಕರನ್ನು ಭೇಟಿಯಾಗಿ ಧನ್ಯವಾದ ತಿಳಿಸಿ ಅವರಿಂದ ಆಶಿರ್ವಾದ ಪಡೆಯುತ್ತಿದ್ದೇನೆ. ಇನ್ನು ಸಂಪುಟ ರಚನೆ ಸುಲಭವಾಗಿ ಆಗಲಿದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಹಲವರು ಆಕಾಂಕ್ಷಿಗಳಿರುವುದು ಸಹಜ ಎಂದರು.

ಹೆಚ್ಚುತ್ತಿರುವ ಕೊರೊನಾ ಸೋಂಕು; ಗಡಿ ಜಿಲ್ಲೆಗಳಲ್ಲಿ ಬಿಗಿ ಕ್ರಮಕ್ಕೆ ಸೂಚಿಸಿದ ಸಿಎಂ ಬೊಮ್ಮಾಯಿ

Home add -Advt

Related Articles

Back to top button