
ಪ್ರಗತಿವಾಹಿನಿ ಸುದ್ದಿ: ಪ್ರಭಾವಿ ಮಂತ್ರಿಯೊಬ್ಬರ ಮೇಲೆ ಹನಿಟ್ರ್ಯಾಪ್ ಷಡ್ಯಂತ್ರ ನಡೆದಿದೆ ಎಂಬ ವಿಚಾರ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೇ ವಿಚಾರ ಇಂದು ವಿಧಾನಸಭೆಯಲ್ಲಿಯೂ ಪ್ರತಿಧ್ವನಿಸಿದೆ.
ವಿಧಾನಸಭೆಯಲ್ಲಿ ಶಾಸಕ ಯತ್ನಾಳ್, ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ನೇರವಾಗಿ ಹೇಳಿದರು. ಈ ವೇಳೆ ಸ್ಪಷ್ಟೀಕರಣ ನೀಡಲು ಮುಂದಾದ ಕೆ.ಎನ್.ರಾಜಣ್ಣ, ಯತ್ನಾಳ್ ನನ್ನ ಹೆಸರು ಪ್ರಸ್ತಾಪಿಸಿದ್ದಕ್ಕೆ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಕಳೆದ 6 ತಿಂಗಳಿಂದ ನನ್ನನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಲು ಯತ್ನ ನಡೆದಿದೆ ಎಂದು ಹೇಳಿದರು.
ಇದರ ಹಿಂದೆ ಯಾರಿದ್ದಾರೆ. ಏನು ಎಂಬುದು ತನಿಖೆಯಾಗಬೇಕು. ಹನಿಟ್ರ್ಯಾಪ್ ಜಾಲದ ಬಗ್ಗೆ ತನಿಖೆಯಾಗಲಿ ನಾನು ಈ ಬಗ್ಗೆ ಲಿಖಿತ ದೂರು ನೀಡುತ್ತೇನೆ ಎಂದು ಹೇಳಿದರು.