*ಸಚಿವ ಕೆ.ಎನ್.ರಾಜಣ್ಣರನ್ನು ಸಂಪುಟದಿಂದ ಕೈಬಿಡುವಂತೆ ಸ್ವಪಕ್ಷದ ಕಾರ್ಯಕರ್ತರಿಂದಲೇ ವರಿಷ್ಠರಿಗೆ ಒತ್ತಾಯ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನ ಕೆಲ ಸಚಿವರ ವಿರುದ್ಧವೇ ಸ್ವಪಕ್ಷದ ಕಾರ್ಯಕರ್ತರು ವರಿಷ್ಹರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಚಿವರಾದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕೊಪಯೋಗಿ ಸಚಿವ ಸತೀಶ್ ಜರಕಿಹೊಳಿ ವಿರುದ್ಧ ಹತ್ತಕ್ಕು ಹೆಚ್ಚು ಕಾರ್ಯಕರ್ತರು ವರಿಷ್ಠರಿಗೆ ದೂರು ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಮನವಿಪತ್ರ ಸಲ್ಲಿಸಿರುವ ಕಾರ್ಯಕರ್ತರು, ಸಚಿವ ಕೆ.ಎನ್.ರಾಜಣ್ಣ ಅನವಶ್ಯಕವಾಗಿ ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಕೆಲ ಸಚಿವರ ಡಿನ್ನರ್ ಮೀಟಿಂಗ್ ಕೂಡ ತಪ್ಪು ಸಂದೇಶ ರವಾನಿಸುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿದ್ದಾರೆ.
ಅಲ್ಲದೇ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗಳೂ ಕೂಡ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿವೆ. ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ