Karnataka NewsLatestPolitics

*ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಕೆ.ಪಿ.ನಂಜುಂಡಿ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಸದಸ್ಯತ್ವಕ್ಕೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೆ.ಪಿ.ನಂಜುಂಡಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ , ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸಮ್ಮುಖದಲ್ಲಿ ಕೆ.ಪಿ.ನಂಜುಂಡಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಕೆ.ಪಿ.ನಂಜುಂಡಿಯನ್ನು ಬರಮಾಡಿಕೊಳ್ಳಲಾಯಿತು.

ಈ ವೇಳೆ ಮಾತನಾಡಿದ ಕೆ.ಪಿ.ನಂಜುಂಡಿ, ಕಳೆದ ಎರಡು ವರ್ಷಗಳಿಂದ ನನಗೆ ಕಾಂಗ್ರೆಸ್ ಸೇರುವಂತೆ ಒತ್ತಡವಿತ್ತು. ಬಿಜೆಪಿಯವರು ನನ್ನ ನು ನಮ್ಮ ಸಮಾಜವನ್ನು ನಿರ್ಲಕ್ಷ ಮಾಡಿದ್ದಾರೆ. ನಮ್ಮ ಹೋರಾಟಕ್ಕೆ ಯಾವುದೇ ಬೆಲೆ ಇಲ್ಲದಾಗಿದೆ. ಹಾಗಾಗಿ ನಾನು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರಿದ್ದೇನೆ ಎಂದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button