*ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಕೆ.ಪಿ.ನಂಜುಂಡಿ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಸದಸ್ಯತ್ವಕ್ಕೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೆ.ಪಿ.ನಂಜುಂಡಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ , ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸಮ್ಮುಖದಲ್ಲಿ ಕೆ.ಪಿ.ನಂಜುಂಡಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಕೆ.ಪಿ.ನಂಜುಂಡಿಯನ್ನು ಬರಮಾಡಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಕೆ.ಪಿ.ನಂಜುಂಡಿ, ಕಳೆದ ಎರಡು ವರ್ಷಗಳಿಂದ ನನಗೆ ಕಾಂಗ್ರೆಸ್ ಸೇರುವಂತೆ ಒತ್ತಡವಿತ್ತು. ಬಿಜೆಪಿಯವರು ನನ್ನ ನು ನಮ್ಮ ಸಮಾಜವನ್ನು ನಿರ್ಲಕ್ಷ ಮಾಡಿದ್ದಾರೆ. … Continue reading *ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಕೆ.ಪಿ.ನಂಜುಂಡಿ*