
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿ ಇದೆ. ಈ ಸಂದರ್ಭದಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಸಭಾಪತಿ ಬಸವರಾಜ್ ಹೊರಟ್ಟಿಗೆ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ಸಭಾಪತಿ ಬಸವರಾಜ್ ಹೊರಟ್ಟಿ ನಿವಾಸದಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಕೆ.ಪಿ.ನಂಜುಂಡಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಕೆ.ಪಿ.ನಂಜುಂಡಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಕೆ.ಪಿ.ನಂಜುಂಡಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ