ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಇನ್ಫೋಸಿಸ್ ಉದ್ಯೋಗಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ ಐ ಅರ್ ದಾಖಲಾಗಿದೆ.
ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷವೇ ದುರಂತಕ್ಕೆ ಕಾರಣ ಎನ್ನಲಾಗಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳೆ ಮುನ್ಸೂಚನೆ ಇದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಮೆರೆದಿದ್ದಾರೆ ಇದರಿಂದಾಗಿಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದೆ. ನೀರು ಹೊರ ಹಾಕಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್ ಐ ಆರ್ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.
ನಿನ್ನೆ ಬೆಂಗಳೂರಿನ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆಯಾಗಿ ತೀವ್ರ ಅಸ್ವಸ್ಥಗೊಂಡಿದ್ದ 22 ವರ್ಷದ ಯುವತಿ ಭಾನುರೇಖಾ ಚಿಕಿತ್ಸೆ ಫಲಕಾರಿಗಾದೇ ಸಾವನ್ನಪ್ಪಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ