Latest

ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ಕೋರ್ಟ್ ಆವರಣದಲ್ಲೇ ಖ್ಯಾತ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.

Home add -Advt

ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ, ಸಾಹಿತಿ ಭಗವಾನ್ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆಂದು ಬೆಂಗಳೂರಿನ ಮೆಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ಮುಗಿಸಿ ಕೋರ್ಟ್ ನಿಂದ ಹೊರಬಂದ ಭಗವಾನ್ ಮುಖಕ್ಕೆ ವಕೀಲೆ ಮೀರಾ ಮಸಿ ಬಳಿದಿದ್ದಾರೆ.

ತಮ್ಮ ಮುಖಕ್ಕೆ ಮಸಿ ಬಳಿದ ಮೀರಾ ವಿರುದ್ಧ ಇದೀಗ ಭಗವಾನ್ ದೂರು ದಾಖಲಿಸಿದ್ದಾರೆ.

Related Articles

Back to top button