*ಈಶ್ವರಪ್ಪಗೆ ಕೈ ಮುಗಿದು ಕೇಳಿಕೊಳ್ತೀನಿ, ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಬಿಜೆಪಿಗೆ ಇಕ್ಕಟ್ಟಿನ ಸ್ಥಿತಿ ಎದುರಾಗಿದೆ. ಯಾರ ಮನವೊಲಿಕೆಗೂ ಬಗ್ಗದ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತ ಎಂದಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನೋವು ಮರೆತು ಪಕ್ಷದೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ. ಈಶ್ವರಪ್ಪನವರಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಏನೇ ನೋವುಗಳಿದ್ದರೂ ಎಲ್ಲವನ್ನೂ ಮರೆತು ಪಕ್ಷದೊಂದಿಗೆ ಕೈಜೋಡಿಸಿ. … Continue reading *ಈಶ್ವರಪ್ಪಗೆ ಕೈ ಮುಗಿದು ಕೇಳಿಕೊಳ್ತೀನಿ, ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದ ಬಿ.ವೈ.ವಿಜಯೇಂದ್ರ*