Latest

ನಾನೇನಾದರೂ ತಪ್ಪು ಮಾಡಿದರೆ ಚೌಡೆಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ; ಮಾಜಿ ಸಚಿವ ಈಶ್ವರಪ್ಪ ಹೇಳಿಕೆ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ನಾನೇನಾದರೂ ತಪ್ಪು ಮಾಡಿದರೆ ಚೌಡೇಶ್ವರಿ ನನಗೆ ಶಿಕ್ಷೆ ಕೊಡಲಿ. ನಾನು ತಪ್ಪು ಮಾಡಿಲ್ಲ ಎಂದರೆ ಬೇಗನೇ ಶಿಕ್ಷೆಯಿಂದ ಹೊರಬರಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ನಮ್ಮ ಮನೆ ದೇವರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಿ ಬಂದಿದ್ದೇನೆ. ದೇವರಲ್ಲಿ ನಾನು ಪ್ರಾರ್ಥನೆಯನ್ನು ಸಲ್ಲಿಸಿದ್ದೇನೆ. 15 ದಿನಗಳಲ್ಲಿ ಇದಕ್ಕೊಂದು ರೂಪ ಬರುತ್ತೆ ಎಂದು ಅಂದುಕೊಂಡಿದ್ದೇನೆ ಎಂದು ಹೇಳಿದರು.

Home add -Advt

ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಕೇಂದ್ರದ ನಾಯಕರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ಆದರೆ ನೂರಕ್ಕೆ ನೂರರಷ್ಟು ದೇವರ ಕೃಪೆಗೆ ಪಾತ್ರನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂಗ್ಲೀಷ್ ಓದಲು ಕಷ್ಟ ಎಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

Related Articles

Back to top button