ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಯಾವುದೇ ದೂರು ನೀಡಿಲ್ಲ. ಅವರು ನಮ್ಮ ನಾಯಕರು, ರಾಜ್ಯದ ಮುಖ್ಯಮಂತ್ರಿಗಳು. ದೂರು ನೀಡುವುದಕ್ಕೂ ಮಾಹಿತಿ ನೀಡುವುದಕ್ಕೂ ವ್ಯತ್ಯಾಸವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ನಾನು ರಾಜಭವನಕ್ಕೆ ಹೋಗಿದ್ದರ ಬಗ್ಗೆ ಸ್ಪಷ್ಟನೆ ನೀಡುತ್ತೇನೆ. ನಾನು ಯಾರ ಬಗ್ಗೆಯೂ ದೂರು ನಿಡಲೆಂದು ಹೋಗಿಲ್ಲ. ದೂರು ಕೊಡುವುದೂ ಇಲ್ಲ. ಯಡಿಯೂರಪ್ಪ ನಮ್ಮ ನಾಯಕರು. ನಮ್ಮ ಇಲಾಖೆಯಲ್ಲಿನ ಸಮಸ್ಯೆಗಳ ಬಗ್ಗೆ ನಾನು ಪತ್ರ ಬರೆದಿದ್ದೆ. ಈ ಬಗ್ಗೆ ಸಿಎಂ ಗಮನಕ್ಕೂ ತಂದಿದ್ದೆ. ಇದೇ ವಿಚಾರವಾಗಿ ರಾಷ್ಟ್ರೀಯ ನಾಯಕರ ಗಮನಕ್ಕೂ ತಂದಿದ್ದೆ ಹೊರತು ಯಾರ ವಿರುದ್ದವೂ ದೂರು ನೀಡಿಲ್ಲ ಎಂದರು.
ಇಲಾಖೆ ಸಮಸ್ಯೆ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತಂದಿದ್ದೆ. ಅದನ್ನು ದೂರು ಎಂದುಕೊಂಡಿರುವುದು ತಪ್ಪು. ಮಾಹಿತಿ ನೀಡುವುದಕ್ಕೂ ದೂರಿಗೂ ವ್ಯತ್ಯಾಸವಿದೆ ಎಂಬುದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು. ನಿಮಗೆ ಬೇಕಿದ್ದರೆ ಈಶ್ವರಪ್ಪ ಹಾಗೂ ಯಡಿಯೂರಪ್ಪನವರಿಗೆ ಆಗುವುದೇ ಇಲ್ಲ ಎಂದು ಬೇಕಾದರೂ ಬರೆದುಕೊಳ್ಳಿ ಎಂದು ಗರಂ ಆದರು.
ಕೈಬಾಂಬ್ ಸ್ಫೋಟ: ಛಿದ್ರ ಛಿದ್ರಗೊಂಡ ಆಕಳಿನ ಬಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ