ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಪುಟ ವಿಸ್ತರಣೆ ಮಾಡಲು ಏನೇನೂ ಸಮಸ್ಯೆಗಳಿವೆಯೋ ಗೊತ್ತಿಲ್ಲ, ನನ್ನನ್ನು ಮಂತ್ರಿ ಮಾಡುವುದು ಬೆಡ ಎಂದು ನಾನೇ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜಕಾರಣದಲ್ಲಿ ಏನಾಗುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ತಾನೆ ಅಂತ ಕನಸು ಬಿದ್ದಿತ್ತಾ? ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿದ ಬಳಿಕ ಮುಖ್ಯಮಂತ್ರಿಗಳಿಗೆ ಸಚಿವ ಸ್ಥಾನ ಕೇಳಿದ್ದೆ. ಸಿಎಂ ಬೊಮ್ಮಾಯಿ ಅವರು ಮಂತ್ರಿ ಮಾಡುತ್ತೇನೆ ಎಂದಿದ್ದರು, ಸಂಪುಟ ವಿಸ್ತರಣೆಗೆ ಅದೇನೇನು ಸಮಸ್ಯೆಗಳಿವೆಯೋ ಗೊತ್ತಿಲ್ಲ ಎಂದು ಹೇಳಿದರು.
ಪಕ್ಷ ಹಾಗೂ ಸರ್ಕಾರಕ್ಕೆ ಸಮಸ್ಯೆ ಮಾಡಲು ನಾನು ರೆಡಿಯಿಲ್ಲ, ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಶಿವಮೊಗ್ಗದಲ್ಲಿ ಶಾಂತಿ ನೆಲೆಸಲಿ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ಹರ್ಷನ ಕೊಲೆಯಾದಬಳಿಕವೂ ಸುಮ್ಮನಿರಬೇಕಾ? ಎಂದು ಪ್ರಶಿಸಿದ್ದಾರೆ. ಪಿಎಫ್ ಐ ಗೂಂಡಾ ಕೊಲೆ ಕೊಲೆ ಮಾಡಿದ ಬಳಿಕವೂ ಅದನ್ನು ಖಂಡಿಸುವ ಪ್ರಯತ್ನವನ್ನು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮಾಡಿಲ್ಲ. ಕೊಲೆಯಾದರೆ ಕಾಂಗ್ರೆಸ್ ನವರಿಗೆ ಖುಷಿ. ಮುಸ್ಲಿಂ ರು ಕೊಲೆಯಾದರೆ ಹಿಂದೂಗಳ ಮೇಲೆ ಆಪಾದನೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
*ಯಾವ ತನಿಖೆ ಬೇಕಾದ್ರೂ ಎದುರಿಸಲು ಸಿದ್ಧ; ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್*
https://pragati.taskdun.com/stolen-maharashtra-government-bus-found-in-karnataka/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ