Latest

ಕೆ.ಎಸ್.ಈಶ್ವರಪ್ಪಗೆ ಸಿಎಂ ಸ್ಥಾನ ನೀಡಿ; ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದರೆ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಹಾಲುಮತ ಮಹಾಸಭಾ ಎಚ್ಚರಿಕೆ ನೀಡಿದೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಸಭಾ, ಬಿ.ಎಸ್.ಯಡಿಯೂರಪ್ಪ ಬಿಜೆಪಿ ತ್ಯಜಿಸಿದಾಗ ಪಕ್ಷವನ್ನು ಉಳಿಸಿದ್ದೇ ಈಶ್ವರಪ್ಪ. ಹೀಗಾಗಿ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಈಶ್ವರಪ್ಪ ಅವರನ್ನು ಸಿಎಂ ಮಾಡಬೇಕು ಎಂದು ಆಗ್ರಹಿಸಿದೆ.

Related Articles

1975-77ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಈಶ್ವರಪ್ಪ ಬಂಧನಕ್ಕೀಡಾಗಿದ್ದರು. ಶೇ.55ರಷ್ಟು ಇರುವ ಹಿಂದುಳಿದ ವರ್ಗಕ್ಕೆ ಬಿಜೆಪಿ ಅನ್ಯಾಯವೆಸಗಿದೆ. ಇದೆಲ್ಲವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದರೆ ಈಶ್ವರಪ್ಪ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಹಾಲುಮತ ಮಹಾಸಭಾ ಒತ್ತಾಯಿಸಿದೆ.
ರಾಜೀನಾಮೆ ವಿಚಾರ; ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು?

Home add -Advt

Related Articles

Back to top button