ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇನ್ನೂ ಮುಂದುವರೆದಿದ್ದು, ಈ ನಡುವೆ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಈಶ್ವರಪ್ಪ, ನನ್ನನ್ನು ಸಿಎಂ ಮಾಡಿ ಎಂದು ನಾನು ಯಾವತ್ತೂ ಕೇಳಿಲ್ಲ. ನಾನು ಯಾವತ್ತೂ ಏನನ್ನೂ ಕೇಳಿ ಪಡೆದವನಲ್ಲ. ಯಾವಾಗ ಯಾರಿಗೆ ಯಾವ ಹುದ್ದೆ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ಹೇಳಿದ್ದಾರೆ.
ನಾನು ಹಲವು ಖಾತೆಗಳನ್ನು ನಿಭಾಯಿಸಿದ್ದೇನೆ. ಒಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ಬಿಜೆಪಿ ಅಧ್ಯಕ್ಷನಾಗಿದ್ದೆ. ಪ್ರತಿಪಕ್ಷದ ನಾಯಕನಾಗಿಯೂ ಕಾರ್ಯನಿರ್ವಹಿಸಿದ್ದೇನೆ. ಈವರೆಗೂ ನನಗೆ ಸಿಎಂ ಹುದ್ದೆ ನೀಡಿ ಎಂದು ಯಾವತ್ತೂ ಕೇಳಿಲ್ಲ. ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಿ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು.
ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ