ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗ ಪತ್ರ ಬರೆದು, ವರಿಷ್ಠರಿಗೆ ದೂರು ನೀಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಈಶ್ವರಪ್ಪ ಅವರ ದೂರಿನ ವಿಚಾರವಾಗಿ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ಈಶ್ವರಪ್ಪನವರು ಹಿರಿಯ ಸಚಿವರು. ಹೀಗೆ ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಪತ್ರ ಬರೆಯಬಾರದಿತ್ತು. ಮನಸ್ತಾಪಗಳಿದ್ದರೆ, ಅಸಮಾಧಾನಗಳಿದ್ದರೆ ಸಿಎಂ ಜೊತೆ ಕುಳಿತು ಚರ್ಚಿಸಬೇಕಿತ್ತು. ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬಹುದಿತ್ತು. ಅದನ್ನು ಬಿಟ್ಟು ಏಕಾಏಕಿ ಹೀಗೆ ಪತ್ರದ ಮೂಲಕ ದೂರು ನೀಡಿರುವುದು ಸರಿಯಲ್ಲ ಎಂದರು.
ಅಲ್ಲದೇ ಈಶ್ವರಪ್ಪ ರಾಜ್ಯಪಾಲರಿಗೂ ಪತ್ರ ಬರೆದಿದ್ದಾರೆ. ಸಧ್ಯ ಚುನಾವಣೆಯ ಕಡೆಗೆ ಗಮನ ಹರಿಸುತ್ತೇವೆ. ಚುನಾವಣೆಗಳು ಮುಗಿದ ಬಳಿಕ ದೂರಿನ ವಿಚಾರದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಈಶ್ವರಪ್ಪ: ಹೈಕಮಾಂಡ್ ಗೆ ದೂರು
ಅನಂತಕುಮಾರ ಹೆಗಡೆ ಮನೆಗೆ ಕಾಗೇರಿ ಹೋಗಿದ್ದೇಕೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ