
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಗ್ರಾಮೀಣಾಬಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದೆ.
ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ರಾಷ್ಟ್ರದ್ರೋಹದ ಕೆಲಸ. ಸಚಿವ ಈಶ್ವರಪ್ಪ ರಾಷ್ಟ್ರದ್ರೋಹವೆಸಗಿದ್ದಾರೆ. ಅವರ ವಿರುದ್ಧ ಕೇಸ್ ದಾಖಲಿಸಿ, ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಅವರ ಹೇಳಿಕೆ ಅಕ್ಷಮ್ಯ ಅಪರಾಧ. ಸಾರ್ವಭೌಮತ್ವಕ್ಕೂ ಅಪಮಾನವೆಸಗಿದ್ದಾರೆ. ಹೀಗಿದ್ದರೂ ಇದೂವರೆಗೂ ಸಚಿವರ ವಿರುದ್ಧ ಸಿಎಂ ಆಗಲಿ, ರಾಜ್ಯಪಾಲರಾಗಲಿ ಕ್ರಮಕ್ಕೆ ಮುಂದಾಗಿಲ್ಲ. ಬಿಜೆಪಿ ನಾಯಕರು ಸಚಿವರ ಹೆಳಿಕೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಆರ್ ಎಸ್ ಎಸ್ ಹಿಡನ್ ಅಜಂಡಾವನ್ನು ಈಶ್ವರಪ್ಪ ಮೂಲಕ ಹೇಳಿಸಿದೆ ಎಂದು ಕಿಡಿಕಾರಿದ್ದಾರೆ.
ಈಶ್ವರಪ್ಪ ಹೇಳಿಕೆ ಕುರಿತು ತಾರ್ಕಿಕ ಅಂತ್ಯ ಸಿಗುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ.
ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಸಚಿವ ಈಶ್ವರಪ್ಪ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ