ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯ ನಾಯಕರನ್ನು ಕೊರೊನಾ ಸೋಂಕು ಬೆಂಬಿಡದೇ ಕಾಡುತ್ತಿದ್ದು, ಇದೀಗ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಈಶ್ವರಪ್ಪ ಮಾಹಿತಿ ನೀಡಿದ್ದು, ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಇತ್ತೀಚೆಗೆ ಸಚಿವ ಈಶ್ವರಪ್ಪನವರ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆ ವೇಳೆ ಸಚಿವರಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬಂದಿತ್ತು. ಇದೀಗ ಪಾಸಿಟೀವ್ ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ