BusinessKannada NewsKarnataka NewsPolitics

*ಅಮೆರಿಕಾ ಕಂಪನಿಯಿಂದ ರಾಜ್ಯದಲ್ಲಿ: 3,600 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಅಮೆರಿಕ ಮೂಲದ ಸೆಮಿಕಂಡಕ್ಟರ್ ಚಿಪ್ ತಯಾರಿಕಾ ಕಂಪನಿಯಾಗಿರುವ ಅಪ್ರೈಡ್ ಮೆಟೀರಿಯಲ್ಸ್ ರಾಜ್ಯದಲ್ಲಿ ಮುಂದಿನ 10 ವರ್ಷಗಳಲ್ಲಿ 3,600 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವರು, ಬೆಂಗಳೂರು ಸಿಗ್ನೆಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಯೋಜನೆಯಿಂದ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ.‌ ಈ ಸಂಬಂಧದ ಒಡಂಬಡಿಕೆಗೆ ಕಂಪನಿ ಜತೆ ಸಹಿ ಮಾಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಪ್ಲೆಡ್ ಮೆಟೀರಿಯಲ್ಸ್ ಕಂಪನಿಯು ಈ ಹೂಡಿಕೆಯ ಮೂಲಕ ಸಂಶೋಧನೆ ಮತ್ತು ಅಭಿವೃದ್ಧಿ ಅಗತ್ಯ ಸಾಧನಗಳ ತಯಾರಿಕೆ, ಸೆಮಿಕಂಡಕ್ಟರ್ ಚಿಪ್ ಉತ್ಪಾದನೆಗೆ ಬೇಕಾದ ಸಾಫ್ಟ್ ವೇರ್ ತಂತ್ರಜ್ಞಾನ ಅಭಿವೃದ್ಧಿಯತ್ತ ಗಮನ ಕೇಂದ್ರೀಕರಿಸಲಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಸಮೀಪದ ಬೆಂಗಳೂರು ಸಿಗ್ನೆಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಜಾರಿಗೊಳ್ಳುತ್ತಿರುವ ಇಂತಹ ಪ್ರಪ್ರಥಮ ಕೈಗಾರಿಕಾ ಯೋಜನೆ ಇದಾಗಿದೆ. ಮೆಟೀರಿಯಲ್ಸ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕಂಪನಿಯ ಈ ಹೂಡಿಕೆಯಿಂದ ಈ ವಲಯಕ್ಕೆ ಬೇಕಾದ ಕಾರ್ಯಪರಿಸರ ಸಶಕ್ತವಾಗಲಿದೆ ಎಂದಿದ್ದಾರೆ.

ಕಂಪನಿಯ ಈ ಯೋಜನೆಗೆ ಸರಕಾರವು ಎಲ್ಲ ಹಂತಗಳಲ್ಲೂ ಸಂಪೂರ್ಣ ಸಹಕಾರ ನೀಡಲಿದೆ. ಈ ಸಂಸ್ಥೆಯು ಎರಡು ದಶಕಗಳಿಂದ ಭಾರತದಲ್ಲಿ ಸಕ್ರಿಯವಾಗಿದ್ದು, ಬೆಂಗಳೂರನ್ನು ತನ್ನ ಪ್ರಮುಖ ಕೇಂದ್ರವನ್ನಾಗಿ ಇಟ್ಟುಕೊಂಡಿದೆ. ತನ್ನ ಭವಿಷ್ಯದ ಹೂಡಿಕೆಗಳಿಗೂ ಕಂಪನಿಯು ರಾಜ್ಯವನ್ನೇ ಆಯ್ದುಕೊಂಡಿರುವುದು ಸ್ವಾಗತಾರ್ಹವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button