ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗದಿಂದ ಪ್ರತ್ಯೇಕ ಚಿಹ್ನೆ ನೀಡಲಾಗಿದೆ.
ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ಗುರುತಾಗಿ ನೀಡಿದೆ. ಹಲವು ವರ್ಷಗಳಿಂದ ಬಿಜೆಪಿಯ ಕಮಲದ ಗುರುತಿನ ಮೂಲಕ ಸ್ಪರ್ಧಿಸುತ್ತಿದ್ದ ಕೆ.ಎಸ್.ಈಶ್ವರಪ್ಪ ಇದೀಗ ಇದೇ ಮೊದಲ ಬಾರಿಗೆ ‘ಕಬ್ಬಿನ ಜೊತೆ ಇರುವ ರೈತ’ನ ಗುರುತಿನಡಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಪುತ್ರ ಕಾಂತೇಶ್ ಗೆ ಹಾವೇರಿ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಇನ್ನು ಇಂದು ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿತ್ತು. ಈಶ್ವರಪ್ಪ ನಾಮಪತ್ರ ಹಿಂಪಡೆಯುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ ಈಶ್ವರಪ್ಪ ನಾಮಪತ್ರ ಹಿಂಪಡೆಯದೇ ಸ್ಪರ್ಧೆ ಖಚಿತಪಡಿಸಿದ್ದಾರೆ. ಈ ಮೂಲಕ ಬಿಜೆಪಿ ನಾಯಕರ ನಿರೀಕ್ಷೆ ಸುಳ್ಳಾಗಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ