Latest

ರಾಜ್ಯಪಾಲರನ್ನು ಭೇಟಿಯಾದ ಸಚಿವ ಈಶ್ವರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತರಾಟೆ ಬೆನ್ನಲ್ಲೇ ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಕುವೆಂಪು ವಿವಿ ಸಮಸ್ಯೆ ಬಗ್ಗೆ ಚರ್ಚಿಸಲು ರಾಜ್ಯಪಾಲರನ್ನು ಭೇಟಿಯಾಗುತ್ತಿದ್ದೇನೆ. ಹೊರತು ರಾಜ್ಯಪಾಲರು ನನ್ನನ್ನು ಕರೆದಿಲ್ಲ, ನಾನಾಗಿಯೇ ಭೇಟಿಯಾಗುತ್ತಿದ್ದೇನೆ ಎಂದು ಹೇಳಿದರು.

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ನಾನು ಹೇಳಿಲ್ಲ, ನನ್ನ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ತಪ್ಪಾಗಿ ಬಿಂಬಿಸಿ ಅನಗತ್ಯ ಗೊಂದಲ ಸೃಷ್ಟಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ನಾಯಕರ ರಾಜಕೀಯ, ಇದಕ್ಕೆ ರಾಜಕೀಯವಾಗಿಯೇ ನಾವು ಉತ್ತರ ಕೊಡುತ್ತೇವೆ. ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಸಿಎಂ ಕೂಡ ಹೇಳಿದ್ದಾರೆ. ಜೆ.ಪಿ.ನಡ್ಡಾ ಅವರ ಹೇಳಿಕೆಗೆ ಸಿಎಂ ಉತ್ತರ ಕೊಡುತ್ತಾರೆ ಎಂದರು.

ಕಾಡಿನಲ್ಲಿರುವ ಎಲ್ಲಾ ಪ್ರಾಣಿಗಳಿಗೆ ಸಿಂಹದ ಬಗ್ಗೆ ಭಯ. ಹಾಗಾಗಿದೆ ಕಾಂಗ್ರೆಸ್ ನಾಯಕರ ಕಥೆ ಸಿಂಹ ಯಾಕೆ ಹಿಂದೇಟು ಹಾಕುತ್ತೆ ಸಿಂಹ ಯಾವತ್ತಿದ್ದರೂ ಸಿಂಹವೇ ಎಂದು ಹೇಳುವ ಮೂಲಕ ಸಚಿವ ಈಶ್ವರಪ್ಪ ತಮ್ಮನ್ನು ಸಿಂಹಕ್ಕೆ ಹೋಲಿಸಿಕೊಂಡಿದ್ದಾರೆ.
ಸಂಸದ ಸೇರಿ ನಾಲ್ವರು ಹಿಂದೂ ಮುಖಂಡರ ಹತ್ಯೆಗೆ ಸಂಚು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button