ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ನಮ್ಮ ನಾಯಕ ಮುರುಗೇಶ್ ನಿರಾಣಿ ಬೇಗನೇ ಸಿಎಂ ಆಗ್ತಾರೆ. ಯಾವ ಸಂದರ್ಭದಲ್ಲಿ ಎಂದು ಗೊತ್ತಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕುತೂಹಲ ಮೂಡಿಸಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಈಶ್ವರಪ್ಪ, ನಮ್ಮ ನಾಯಕ ನಿರಾಣಿಯವರು ಶೀಘ್ರದಲ್ಲಿಯೇ ಸಿಎಂ ಆಗ್ತಾರೆ. ಆದರೆ ಯಾವ ಸಂದರ್ಭದಲ್ಲಿ ಎಂಬುದು ನನಗೆ ಗೊತ್ತಿಲ್ಲ. ನಾಳೇನೆ ಆಗ್ತಾರಾ?, ಬೊಮ್ಮಾಯಿಯನ್ನು ಕೆಳಗಿಳಿಸ್ತಾರಾ? ಹೀಗೆಂದು ಮಾಧ್ಯಮದವರು ಬರಬೇಡಿ… ನಿರಾಣಿಗೆ ಸಿಎಂ ಆಗುವ ಶಕ್ತಿ ಇದೆ, ಇವತ್ತಲ್ಲ ನಾಳೆ ಆಗ್ತಾರೆ ಎಂದರು.
ಇಡೀ ರಾಜ್ಯದ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವಂಥ ಸಿಎಂ ಆಗಬೇಕು. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡ್ತಿಯೇನಪ್ಪಾ? ಎಂದು ಈಶ್ವರಪ್ಪ ಮುರುಗೇಶ್ ನಿರಾಣಿ ಬಳಿ ಕೇಳಿದ್ದಾರೆ. ಇದಕ್ಕೆ ನಿರಾಣಿಯಯವರು ಆಗಲಿ ಎಂದು ನಗುತ್ತಲೇ ಉತ್ತರುಸಿದ ಪ್ರಸಂಗ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ