
ಪ್ರಗತಿವಾಹಿನಿ ಸುದ್ದಿ: ದೇಶ ಒಡೆಯುವ ಹೇಳಿಕೆ ನೀಡುವ ರಾಷ್ಟ್ರದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಿ ಹೇಳಿಕೆ ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ದೇಶ ವಿಭಜನೆ ಹೇಳಿಕೆ ನೀಡಿ ರಾಷ್ಟ್ರದ್ರೋಹವೆಸಗುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಸಂಸದ ಡಿ.ಕೆ.ಸುರೇಶ್ ವಿರುದ್ಧ ಹರಿಹಾಯ್ದಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಕೇಸ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸರು ಈಶ್ವರಪ್ಪನವರಿಗೆ ನೋಟಿಸ್ ನೀಡಿದ್ದಾರೆ.
ಶಿವಮೊಗ್ಗದ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ತೆರಳಿದ ದಾವಣಗೆರೆ ಪೊಲೀಸರು ಮಾಜಿ ಸಚಿವರಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ