*ಕರ್ನಾಟಕದ ಅಜಿತ್ ಪವಾರ್ ಕಾಯುತ್ತಿದ್ದಾರೆ; ಇಲ್ಲಿಯೂ ದಿಢೀರ್ ರಾಜಕೀಯ ಬದಲಾವಣೆಯಾಗುತ್ತೆ ಎಂದ ಮಾಜಿ ಸಚಿವ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾರಾಷ್ಟ್ರ ರಾಜಕಾರಣದಲ್ಲಿ ನಡೆದಂತೆ ಕರ್ನಾಟಕದಲ್ಲಿಯೂ ಕ್ಷಿಪ್ರ ರಾಜಕೀಯ ಕ್ರಾಂತಿಯಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಡಿದ ಕೆ.ಎಸ್.ಈಷ್ವರಪ್ಪ, ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿಯೂ ಆಗಲಿದೆ. ಅಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್, ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ ಉಪಮುಖ್ಯಮಂತ್ರಿಯಾಗಿದ್ದಾರೆ. ಅದೇ ತರ ಕರ್ನಾಟಕ ರಾಜಕಾರಣದಲ್ಲೂ ಆಗಲಿದೆ ಎಂದು ಭವಿಷ್ಯ ನುಡಿದರು.
ಮಹಾರಾಷ್ಟ್ರ ರಾಜಕಾರಣದಲ್ಲಿ ಆದಂತಹ ಕ್ಷಿಪ್ರ ಕ್ರಾಂತಿ ಇಲ್ಲಿಯೂ ಆಗಲಿದೆ. ಕರ್ನಾಟಕದ ಅಜಿತ್ ಪವಾರ್ ಕಾಯುತ್ತಾ ಕುಳಿತಿದ್ದಾರೆ ಎಂದು ಹೇಳಿದರು.
ನಿನ್ನೆಯಷ್ಟೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿಯೂ ಮಹಾರಾಷ್ಟ್ರ ರಾಜಕಾರಣದಂತೆ ದಿಢೀರ್ ಬದಲಾವಣೆಯಾಗುವ ಸಂಭವವಿದೆ ಎಂದು ಹೇಳಿಕೆ ನೀಡಿದ್ದರು. ಈಗ ಅದರ ಬೆನ್ನಲ್ಲೇ ಕೆ.ಎಸ್.ಈಶ್ವರಪ್ಪ ಕೂಡ ಇದೇ ರೀತಿ ಮಾತುಗಳನ್ನು ಆಡಿರುವುದು ಕುತೂಹಲ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ