Kannada NewsKarnataka NewsLatestPolitics

*ಮೋದಿ ಕಾರ್ಯಕ್ರಮಕ್ಕೂ ಹೋಗಲ್ಲ; ಬಂಡಾಯದಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ*

ಪ್ರಗತಿವಾಹಿನಿ ಸುದ್ದಿ: ಪುತ್ರ ಕಾಂತೇಶ್ ಗೆ ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿರುವ ಕೆ.ಎಸ್.ಈಶ್ವರಪ್ಪ, ಪಕ್ಷದ ವಿರುದ್ಧ ಬಂಡಾಯ ಸಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆ.ಎಸ್.ಈಶ್ವರಪ್ಪ, ನನ್ನ ಪುತ್ರನಿಗೆ ಮಾತ್ರವಲ್ಲ ಹಲವು ಹಿಂದುತ್ವವಾದಿ ಮುಖಂಡರಿಗೂ ಮೋಸ ಆಗಿದೆ. ಬಿಜೆಪಿ ಯಡಿಯುರಪ್ಪ ಹಾಗೂ ಮಕ್ಕಳ ಕೈಯಲ್ಲಿ ಸಿಲುಕಿಕೊಂಡಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಹೋರಾಡಬೇಕಿದೆ ಎಂದು ವಾಗ್ದಾಳಿ ನಡೆಸಿದರು.

Home add -Advt

ಈ ನಿಟ್ಟಿನಲ್ಲಿ ನಾನು ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕಿಳಿಯುತ್ತೇನೆ. ಇಂದು ಅರಗ ಜ್ಞಾನೇಂದ್ರ ಹಾಗೂ ಹಲವರು ಮನೆಗೆ ಬಂದಿದ್ದರು. ಮನವೊಲಿಕೆಯ ಪ್ರಶ್ನೆ ಇಲ್ಲ. ಯಾರು ಏನೇ ಹೇಳಿದರೂ ನನ್ನ ನಿರ್ಧಾರ ಬದಲಾಗಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು.

ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಬರಲಿದ್ದಾರೆ. ನಾನು ಮೋದಿ ಪರ ಧ್ವನಿ ಎತ್ತುತ್ತೇನೆ. ಆದರೆ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ. ಈ ಬಗ್ಗೆ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದರು.


Related Articles

Back to top button