ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ತಿರುಗೇಟು ನೀಡಿರುವ ಈಶ್ವರಪ್ಪ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುತ್ತಿರುವುದು ಡಿ.ಕೆ.ಶಿವಕುಮಾರ್ ಅವರು ಮೊದಲು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಯಾರು ರಾಷ್ಟ್ರದ್ರೋಹ ಮಾಡಿದ್ದಾರೆ ಅವರು ರಾಜೀನಾಮೆ ನೀಡಲಿ. ರಾಷ್ಟ್ರಧ್ವಜ ಹಿಡಿದು ಧರಣಿ ನಡೆಸುತ್ತಿರುವ ಡಿ.ಕೆ.ಶಿವಕುಮಾರ್ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ. ಅವರು ಮೊದಲು ರಾಜೀನಾಮೆ ನೀಡಲಿ ಎಂದರು.
ರಾಷ್ಟ್ರ ಭಕ್ತನಾಗಿರುವ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಶಾಲೆಯ ಧ್ವಜ ಕಂಬದಲ್ಲಿ ರಾಷ್ಟ್ರಧ್ವಜ ಇರಲಿಲ್ಲ, ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾರಿಸಿದ್ರು ಅಂತಾರೆ. ಅನಗತ್ಯವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ಅವರು. ಈಗ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅದು ಕೂಡ ರಾಷ್ಟ್ರಧ್ವಜಕ್ಕೆ ಮಾಡುವ ಅಪಮಾನವಾಗಿದೆ. ನಾನು ತಿರಂಗ ಯಾತ್ರೆ ಮಾಡಿದವನು. ರಾಷ್ಟ್ರ ಭಕ್ತನಾದ ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಮಾಜಿ ಶಾಸಕ ಜಿ.ವಿ.ಮಂಟೂರ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ