ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಗೆ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಉದ್ಧವ್ ಠಾಕ್ರೆ ಆಕಾಶದಿಂದ ಇಳಿದು ಬಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯಿಸಿ, ಬೆಳಗಾವಿಯಲ್ಲಿ ನಡೆಯುತ್ತಿರುವ ಎಂಇಎಸ್ ಪುಂಡಾಟವನ್ನು ಸಮರ್ಥಿಸಿಕೊಳ್ಳುವಂತೆ ಮರಾಠಿಗರ ಮೇಲೆ ದೌರ್ಜನ್ಯ ಎಂದು ಆರೋಪಿಸಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಿದ್ದಾರೆ. ಉದ್ಧವ್ ಠಾಕ್ರೆಯೇನು ಆಕಾಶದಿಂದ ಇಳಿದು ಬಂದವರಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ ಮಹಾರಾಷ್ಟ್ರ ಸಿಎಂ ಟ್ವೀಟ್ ಗೆ ರಾಜ್ಯದ ಕಾಂಗ್ರೆಸ್ ನಾಯಕರು ಉತ್ತರಿಸಲಿ ಎಂದು ಆಗ್ರಹಿಸಿದ್ದಾರೆ.
ನೆಲ, ಜಲ, ಭಾಷೆ, ಮಹಾ ಪುರುಷರ ಹೆಸರಲ್ಲಿ ರಾಜಕೀಯ ಮಾಡಬಾರದು. ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಎಂಇಎಸ್ ವಿರುದ್ಧ ಕನ್ನಡಿಗರ ಆಕ್ರೋಶ; ಪಿರನವಾಡಿಯಲ್ಲಿ ಕರವೇ ಬೃಹತ್ ಪ್ರತಿಭಟನೆ; ವಶಕ್ಕೆ ಪಡೆದ ಪೊಲೀಸರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ